Show notes
ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ।
ನಿಲ್ಲದಾಡುತ್ತಿಹವು ಯಂತ್ರ ಕೀಲುಗಳು॥
ಎಲ್ಲಾಗುಹೋಗುಗಳುಮಾ ಚಕ್ರಗತಿಯಂತೆ।
ತಲ್ಲಣವು ನಿನಗೇಕೆ? ಮಂಕುತಿಮ್ಮ ॥ 461
ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು ।
ತೇಲುತ್ತೆ ಭಯವ ಕಾಣದೆ ಸಾಗುತಿರಲು ॥
ಗಾಳಿಯಾವಗಮೊ ಬಂದೆತ್ತಣಿನೊ ಬೀಸುತ್ತ ॥
ಮೇಲ ಕೀಳಾಗಿಪುದು – ಮಂಕುತಿಮ್ಮ ॥ 462

